ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾನುವಾರ ಮುಂಜಾನೆ ನೋಯ್ಡಾದ ನಾಲೆಡ್ಜ್ ಪಾರ್ಕ್ ಬಳಿಯ ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿರುವುದಾಗಿ ಗ್ರೇಟರ್ ನೋಯ್ಡಾ ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು,  ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!