ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಮೇಘ ಸ್ಫೋಟ ಸಂಭವಿಸಿದ್ದು, ಭಾರಿ ಮಳೆಗೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ನಾಲ್ಕು ಮಂದಿ ಕಣ್ಮರೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಮೃತರನ್ನು ಮಾಧುರಿ (42), ರೀತು (38) ಮತ್ತು ಐಶು(6) ಎಂದು ಗುರುತಿಸಲಾಗಿದೆ.
ಈ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಜಗದಾಂಭ ಪ್ರಸಾದ್ ಮಾಹಿತಿ ನೀಡಿದ್ದು, ಭಾರಿ ಮಳೆಯಿಂದಾಗಿ ಉತ್ತರಕಾಶಿಯ ಅನೇಕ ಮನೆಗಳು ಜಲಾವೃತಗೊಂಡಿದೆ. ಮೇಘ ಸ್ಫೋಟದ ಪರಿಣಾಮ ಮೂವರು ಮೃತಪಟ್ಟಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದರು.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಎಸ್ ಡಿಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.