ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಕಾರ್ಮಿಕರು ಸಾವು, ಐವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಹುಂಬಳ ಗ್ರಾಮದ ಬಳಿ ವಾಹನ ಅಪಘಾತಕ್ಕೀಡಾಗಿದ್ದು, ಕಾರ್ಮಿಕರು ಖೇಲಾನಿಯಿಂದ ಮರ್ಮತ್ ಪ್ರದೇಶದ ಕಡೆಗೆ ಚಲಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಮೃತರನ್ನು ಮಣಿ ಕುಮಾರ್ (31), ಕಿರಣಜಿತ್ ಸಿಂಗ್ (40) ಮತ್ತು ಲಾಲ್ ಚಂದ್ (45) ಎಂದು ಗುರುತಿಸಲಾಗಿದೆ.
ಐವರು ಗಾಯಾಳುಗಳನ್ನು ರಕ್ಷಿಸಲಾಗಿದ್ದು, ದೋಡಾದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.