ಪ್ಯಾರೀಸ್ ನಲ್ಲಿ‌ ಬಂದೂಕುದಾರಿಯಿಂದ ಗುಂಡಿನ‌ ದಾಳಿ: ಮೂವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಶುಕ್ರವಾರ ಸೆಂಟ್ರಲ್ ಪ್ಯಾರಿಸ್‌ನ ಕುರ್ದಿಶ್ ಸಾಂಸ್ಕೃತಿಕ ಕೇಂದ್ರ ಮತ್ತು ಸಮೀಪದ ಕುರ್ದಿಶ್ ಕೆಫೆಯಲ್ಲಿ ಬಂದೂಕುಧಾರಿಯೊಬ್ಬ ಮೂವರನ್ನು ಕೊಂದಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ 69 ವರ್ಷದ ಶಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ. ಫ್ರಾನ್ಸ್‌ನ ಕುರ್ದಿಶ್ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಪ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಹೇಳಿದ್ದಾರೆ. ದಾಳಿಕೋರ ಈ ಹಿಂದೆ ಫ್ರೆಂಚ್ ರಾಜಧಾನಿಯಲ್ಲಿನ ವಲಸಿಗ ಶಿಬಿರದ ಮೇಲೆ ದಾಳಿ ನಡೆಸಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಸಾವನ್ನಪ್ಪಿದ ಮೂವರೂ ಕುರ್ದಿಶ್ ವ್ಯಕ್ತಿಗಳಾಗಿದ್ದಾರೆ. ಗುಂಡಿನ ದಾಳಿಯಿಂದ ಕೋಪಗೊಂಡ ಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳ ಮೇಲೆ ಸ್ಪೋಟಕಗಳನ್ನು ಎಸೆಯಲಾಗಿದೆ. ಜನರು ರಸ್ತೆಯ ಮಧ್ಯದಲ್ಲಿ ಬೆಂಕಿ ಹಚ್ಚುವುದು ಮತ್ತು ಕುರ್ಚಿಗಳು ಮತ್ತು ಇತರ ವಸ್ತುಗಳನ್ನು ಎಸೆಯುವುದನ್ನು ದೃಶ್ಯಾವಳಿಗಳು ತೋರಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!