ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮಿರ್ ಖಾನ್ ಅಭಿನಯದ ‘3 ಈಡಿಯಟ್ಸ್’ ಸಿನಿಮಾ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ನಟ ಅಖಿಲ್ ಮಿಶ್ರಾ (58) ಇಂದು ನಿಧನರಾಗಿದ್ದಾರೆ.
ಮಾಧ್ಯಮಗಳ ವರದಿಯ ಪ್ರಕಾರ, ನಟ ತನ್ನ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿರುವ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆಯೊಯ್ಯಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಟನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.