ಅಮೆರಿಕಾದಲ್ಲಿ ಭೀಕರ ಅಪಘಾತ: ಮೂವರು ಭಾರತೀಯ ವಿದ್ಯಾರ್ಥಿಗಳು ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಅಮೆರಿಕದ ಪಶ್ಚಿಮ ಮೆಸಾಚುಸೆಟ್ಸ್‌ನಲ್ಲಿ ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಪ್ರೇಮ್ ಕುಮಾರ್ ರೆಡ್ಡಿ ಗೋಡಾ (27), ಪಾವನಿ ಗುಲ್ಲಪಲ್ಲಿ (22) ಮತ್ತು ಸಾಯಿ ನರಸಿಂಹ ಪಟಂಶೆಟ್ಟಿ (22) ಅವರು ಘರ್ಷಣೆಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಎರಡು ವಾಹನಗಳ ಡಿಕ್ಕಿಯಲ್ಲಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇತರ ಐದು ಜನರನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆ. ಈ ಸಂಬಂಧ ನಿಖೆ ನಡೆಸಲಾಗುತ್ತಿದೆ ಎಂದು ಮ್ಯಾಸಚೂಸೆಟ್ಸ್ ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿದ್ದವರನ್ನು ಅಂತಾರಾಷ್ಟ್ರೀಯ ಕಾಲೇಜು ವಿದ್ಯಾರ್ಥಿಗಳು ಎಂದು ಪೊಲೀಸರು ಗುರುತಿಸಿದ್ದಾರೆ. ಆರು ಮಂದಿ ನ್ಯೂ ಹೆವನ್ ವಿಶ್ವವಿದ್ಯಾಲಯದಲ್ಲಿ ಮತ್ತು ಒಬ್ಬರು ಸೇಕ್ರೆಡ್ ಹಾರ್ಟ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!