ಜಮ್ಮುವಿನಲ್ಲಿ ಸೇನೆಯ ಭರ್ಜರಿ ಬೇಟೆ: ಮ್ಮೂವರು ಡ್ರಗ್‌ ಸ್ಮಗ್ಲರ್‌ ಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಕಾಶ್ಮೀರದಲ್ಲಿ ಮೂವರು ಅಕ್ರಮ ನುಸುಳುಕೋರರನ್ನು ಭಾರತೀಯ ಸೇನೆ ಇಂದು ಬೆಳಗ್ಗೆ ಹೊಡೆದುರುಳಿಸಿದೆ.
ಈ ಬಗ್ಗೆ ಗಡಿ ಭದ್ರತಾ ಪಡೆ ಮಾಹಿತಿ ನೀಡಿದ್ದು, ಜಮ್ಮು ಕಾಶ್ಮೀರದ ಸಾಂಬಾದ ಅಂತಾರಾಷ್ಟ್ರೀಯ ಗಡಿಯ ಮೂಲಕ ಭಾರತದ ಒಳ ನುಸುಳಲು ಯತ್ನಿಸುತ್ತಿದ್ದ ಮೂವರನ್ನು ಹತ್ಯೆ ಮಾಡಲಾಗಿದೆ. ಇನ್ನು ನುಸುಳುಕೋರರ ಬಳಿ ಇದ್ದ 36 ಕೆ.ಜಿ. ಡ್ರಗ್ಸ್‌ ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಭದ್ರತಾ ಪಡೆ ತಿಳಿಸಿದೆ.
ಭಾನುವಾರ ಮುಂಜಾನೆ 2.30ರ ಸುಮಾರಿಗೆ ಗಡಿ ಕಾವಲುಗಾರರು ನುಸುಳುಕೋರರ ಚಲನವಲನ ಪತ್ತೆ ಹಚ್ಚಿದ ಬಳಿಕ ಸ್ಥಳಕ್ಕೆ ದೌಡಾಯಿಸಿದ ಭಾರತೀಯ ಸೇನೆ ಯಶಸ್ವಿ ಕಾರ್ಯಚರಣೆ ನಡೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!