ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೈನ್‌ಪುರಿ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಮ್‌ಜಿ ಮಿಶ್ರಾ ತಿಳಿಸಿದರು.
ಇನ್ನೂ ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಮಳೆಗಾಲದಲ್ಲಿ ವಿದ್ಯುತ್ ಸಂಬಂಧಿತ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ, ಯೋಗಿ ಸರ್ಕಾರ ಕಳೆದ ತಿಂಗಳು ಇಲಾಖಾ ಅಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ಹೊರಡಿಸಿತು. ಇದರಲ್ಲಿ ಮಳೆಯ ಸಮಯದಲ್ಲಿ ಸಂಭವಿಸುವ ದೋಷಗಳನ್ನು ಸರಿಪಡಿಸುವುದು ಮತ್ತು ನಿರ್ವಹಣಾ ಕಾರ್ಯದಲ್ಲಿ ನಿಗದಿತ ಮಾನದಂಡಗಳನ್ನು ಅನುಸರಿಸುವುದು ಸೇರಿದೆ.
ಅಪಘಾತಗಳನ್ನು ತಡೆಗಟ್ಟಲು ಮತ್ತು ನಿರ್ದಿಷ್ಟ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಸರ್ಕಾರವು ವಿದ್ಯುತ್ ವಿತರಣಾ ಸಿಬ್ಬಂದಿಗೆ ಸೂಚನೆ ನೀಡಿದೆ. ಅಧಿಕಾರಿಗಳು ನಿರ್ಲಕ್ಷ್ಯ ತೋರಿದರೆ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಎಲ್ಲೆಲ್ಲಿ ಇಂತಹ ಅವಘಡಗಳು ಸಂಭವಿಸಿದರೂ ಗಾಯಾಳುಗಳ ಸಂಪೂರ್ಣ ಆರೈಕೆ ಹಾಗೂ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಹಾಗೂ ನಿಯಮಾನುಸಾರ ಅರ್ಹ ಪರಿಹಾರವನ್ನು ಸಕಾಲದಲ್ಲಿ ನೀಡುವಂತೆಯೂ ಅವರು ಸೂಚಿಸಿದರು.