Thursday, July 7, 2022

Latest Posts

ಬೆಳಗಾವಿ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು

ಹೊಸದಿಗಂತ ವರದಿ,ಬೆಳಗಾವಿ:

ತಾಲೂಕಿನ ಹಿರೇಬಾಗೇವಾಡಿ ಬಳಿಯ ವಿರಪನ ಕೊಪ್ಪ ಕ್ರಾಸ್ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಮೂಲದವರು. ಧಾರವಾಡ ಕಡೆಯಿಂದ ಬೆಳಗಾವಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಮುಂದಿದ್ದ ಲಾರಿಗೆ ಹಿಂದಿನಿಂದ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಸ್ಥಳದಲ್ಲಿಯೇ ಸಾವಿಗಿಡಾಗಿದ್ದಾರೆ . ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ .
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಮೂಲದವರಾದ ಇವರೆಲ್ಲ ಬೆಳಗಾವಿಗೆ ಆಸ್ಪತ್ರೆಗೆಂದು ಬರುತ್ತಿದ್ದರು ಎನ್ನಲಾಗಿದೆ . ವಾಸಿಂ ಖಾನ್ ( 40 ), ಸೈಯದ್ ಇಸ್ಮಾಯಿಲ್ ದಾವುದ್ ( 65 ), ಸುಶೀಲಾ ಫರ್ನಾಂಡಿಸ್ ( 60 ) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಜಾವೇದ್ ( 41 ) ಹಾಗೂ ಮುಕ್ತಿಯಾರ್ ಸಯ್ಯದ್ ( 60 ) ತೀವ್ರ ಗಾಯಗೊಂಡಿದ್ದು ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss