ತೃಣಮೂಲ ಕಾಂಗ್ರೆಸ್ ನಾಯಕನ ಮನೆಯಲ್ಲಿ ಬಾಂಬ್ ಸ್ಫೋಟ: 3 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರೊಬ್ಬರ ಮನೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ.
ಇಂದು ಜಿಲ್ಲೆಯಲ್ಲಿ ಟಿಎಂಸಿಯ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ನಿಗದಿತ ರ್ಯಾಲಿಯ ಸ್ಥಳವಾದ ಪೂರ್ವ ಮಿಡ್ನಾಪುರದ ಕೊಂಟೈನಿಂದ ಸುಮಾರು 40 ಕಿಮೀ ದೂರದಲ್ಲಿ ಸ್ಫೋಟ ಸಂಭವಿಸಿದೆ. ಭೂಪತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭಾಗಬನ್‌ಪುರ ಬ್ಲಾಕ್ 2ರ ನಾರ್ಯಬಿಲಾ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ.
ಶುಕ್ರವಾರ ರಾತ್ರಿ 11.15ರ ಸುಮಾರಿಗೆ ನಾರ್ಯಬೈಲ ಗ್ರಾಮದ ತೃಣಮೂಲ ಕಾಂಗ್ರೆಸ್‌ನ ಬೂತ್ ಅಧ್ಯಕ್ಷರ ಮನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟದಿಂದಾಗಿ ಮನೆಗೂ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಸ್ಫೋಟದ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಆದರೆ ಪರಿಣಾಮವು ಎಷ್ಟು ಪ್ರಬಲವಾಗಿದೆಯೆಂದರೆ, ಘಟನೆಯಲ್ಲಿ ಹುಲ್ಲಿನ ಛಾವಣಿ ಹೊಂದಿದ್ದ ಮಣ್ಣಿನ ಮನೆ ಹಾರಿಹೋಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ತೃಣಮೂಲ ನಾಯಕನ ಮನೆಯಲ್ಲಿ ದೇಶಿ ನಿರ್ಮಿತ ಬಾಂಬ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್, ‘ರಾಜ್ಯದಲ್ಲಿ ಬಾಂಬ್ ತಯಾರಿಕೆ ಉದ್ಯಮ ಮಾತ್ರ ಅಭಿವೃದ್ಧಿ ಹೊಂದುತ್ತಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!