ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಲಾಸ್ ವೇಗಾಸ್‌ನ ನೆವಾಡಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಮೂವರು ಮೃತಪಟ್ಟಿದ್ದಾರೆ. ಓರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಬುಧವಾರ ನಡೆದಿದೆ.
ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗುಂಡಿನ ಚಕಮಕಿಯಲ್ಲಿ ಶಂಕಿತ ಕೂಡ ಮೃತಪಟ್ಟಿದ್ದಾನೆ ಎಂದು ಲಾಸ್ ವೇಗಾಸ್ ಮೆಟ್ರೋಪಾಲಿಟನ್ ಪೊಲೀಸರು ತಿಳಿಸಿದ್ದಾರೆ.
ಶಂಕಿತನನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಈ ಗುಂಡಿನ ದಾಳಿಯ ನಂತರ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿರುವ ಕಟ್ಟಡಗಳ ತೆರವು ಕಾರ್ಯ ನಡೆಯುತ್ತಿದೆ ಎಂದು ಯೂನಿವರ್ಸಿಟಿ ಪೊಲೀಸ್ ಸರ್ವಿಸಸ್ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ತಿಳಿಸಿದೆ.