ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರೋನಾ ಸಕ್ರಿಯ ಸೋಂಕಿತರ ಸಂಖ್ಯೆಯಲ್ಲಿ ದೇಶದ 10 ರಾಜ್ಯಗಳಲ್ಲಿ ಶೇ. 77ರಷ್ಟು ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಆದರೆ ಲಸಿಕೆಯಿಂದ ದೇಶದಲ್ಲಿ ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಹಾಗೂ ಸೋಂಕಿನ ತೀವ್ರತೆ ಕಡಿಮೆಯಾಗಿದೆ ಎಂದಿದೆ.
ಕರ್ನಾಟಕ, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಿಂದ 3 ಲಕ್ಷಕ್ಕೂ ಹೆಚ್ಚು ಸಕ್ರಿಯ ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನು ತಮಿಳುನಾಡು, ಆಂಧ್ರಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಒಂದು ಲಕ್ಷ ಸಕ್ರಿಯ ಸೋಂಕಿತರಿದ್ದಾರೆ ಎಂದು ತಿಳಿಸಿದೆ.
ದೇಶದ 11 ರಾಜ್ಯಗಳಲ್ಲಿ 50ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, 14 ರಾಜ್ಯಗಳಲ್ಲಿ 10-50ಸಾವಿರ ಸಕ್ರಿ ಸೋಂಕಿತರು ಹಾಗೂ 11 ರಾಜ್ಯಗಳಲ್ಲಿ 10 ಸಾವಿರಕ್ಕಿಂತ ಕಡಿಮೆ ಸಕ್ರಿಯ ಸೋಂಕಿತರಿದ್ದಾರೆ. ಈ ಮೂಲಕ ದೇಶದಲ್ಲಿ ಪಾಸಿಟಿವಿಟಿ ದರ ಶೇ.17ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ತಿಳಿಸಿದ್ದಾರೆ.
ಉತ್ತರ ಪ್ರದೇಶ, ದೆಹಲಿ, ಒಡಿಶಾ, ಹರಿಯಾಣ ಮತ್ತು ಪಶ್ಚಿಮ ಬಂಗಾಳದಲ್ಲಿ ದಿನನಿತ್ಯದ ಕೇಸ್ ಗಳ ಪ್ರಮಾಣ ಸ್ಥಿರವಾದ ಇಳಿಕೆ ಕಾಣುತ್ತಿದೆ.