Friday, March 1, 2024

ವಿದ್ಯಾನಗರಿಯಲ್ಲಿ ಸಿದ್ಧವಾಗ್ತಿದೆ 3 ಲಕ್ಷ ರಾಮ, ಹನುಮಂತನ ಧ್ವಜ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಜ. 22ಕ್ಕೆ ಅಯೋಧ್ಯೆ ರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ನಡೆದರೆ ಮನೆ ಮನೆಗಳಲ್ಲಿ ರಾಮನ ಧ್ವಜ ಹಾರಲಿದೆ. ಈ ಕಾರಣಕ್ಕೆ ವಿದ್ಯಾನಗರಿ ಧಾರವಾಡದಲ್ಲಿ ರಾಮನ ಧ್ವಜದ ತಯಾರಿ‌ ಭರದಿಂದ ಸಾಗಿದೆ.

ನಗರದ ಮರಾಠ ಗಲ್ಲಿಯಲ್ಲಿರುವ ಪ್ರತೀಶ್ ಜಾಧವ್‌ ಅವರಿಗೆ ಈಗಾಗಲೇ ರಾಮ, ಹನುಮಂತನ 3 ಲಕ್ಷ ಧ್ವಜ ಬೇಕೆಂದು ಆರ್ಡರ್‌ ಬಂದಿದೆ. ಕಳೆದ 15 ದಿನಗಳಿಂದ ಪ್ರತೀಶ್ ಅವರು ಧ್ವಜ ತಯಾರಿ ಮಾಡುತ್ತಿದ್ದಾರೆ. ಈಗಾಗಲೇ 1.5 ಲಕ್ಷ ಧ್ವಜ ರವಾನೆಯಾಗಿದೆ.

ಮೊದಲಿನಿಂದಲೂ ಇದೇ ಕೆಲಸ ಮಾಡುತ್ತಿರುವ ಜಾಧವ್‌ ಅವರಿಗೆ ಈ ಪುಣ್ಯ ಕಾರ್ಯಕ್ರಮದಿಂದ ಈ ಬಾರಿ ಬಂಪರ್‌ ಆರ್ಡರ್ ಬಂದಿವೆ. ಕರ್ನಾಟಕ ಮಾತ್ರವಲ್ಲದೇ ಪಕ್ಕದ ಗೋವಾ, ತೆಲಂಗಾಣ ಹಾಗೂ ಆಂಧ್ರದಿಂದಲೂ ಬಂದಿದೆ.

4 ಗಾತ್ರದ ಧ್ವಜ ತಯಾರಿ ನಡೆದಿದ್ದು, ಸಣ್ಣ ಧ್ವಜದಿಂದ ಹಿಡಿದು 5 ಮೀಟರ್‌ವರೆಗೆ ಧ್ವಜ ಇವೆ. 5 ರೂ.ನಿಂದ ಹಿಡಿದು 350 ರೂ.ವರೆಗೆ ಧ್ವಜದ ಬೆಲೆ ಇವೆ.‌ ಸುಮಾರು 80 ಕಾರ್ಮಿಕರು ಕೆಲ ವಾರಗಳಿಂದ ಪ್ರತಿ ದಿನವೂ ಕೆಲಸ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!