3 ಎಲ್‌ಇಟಿ ಉಗ್ರರನ್ನು ಹೊಡೆದುರುಳಿಸಿದ ಕಾಶ್ಮೀರ ಪೋಲೀಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ 12 ಗಂಟೆಗಳ ಕಾರ್ಯಾಚರಣೆಯಲ್ಲಿ ಲಷ್ಕರ್‌ ಎ ತೋಯ್ಬಾದ ಮೂವರು ಉಗ್ರರನ್ನು ಕಾಶ್ಮೀರ ಪೋಲೀಸರು ಹೊಡೆದುರುಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಹತರಾದ ಮೂವರು ಉಗ್ರರನ್ನು ಜುನೈದ್ ಶೀರ್ಗೋಜ್ರಿ, ಫಾಜಿಲ್ ನಜೀರ್ ಭಟ್ ಮತ್ತು ಇರ್ಫಾನ್ ಅಹ್ ಮಲಿಕ್ ಎಂದು ಗುರುತಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೋಲೀಸ್ ವಿಜಯ್ ಕುಮಾರ್ ಅವರು, “ಲಷ್ಕರ್‌ ಎ ತೋಯ್ಬಾದೊಂದಿಗೆ ಸಂಪರ್ಕ ಹೊಂದಿದ್ದ ಮೂವರನ್ನು ಎನ್‌ ಕೌಂಟರ್‌ ಮಾಡಲಾಗಿದೆ. ಅವರಲ್ಲಿ ಒಬ್ಬನನ್ನು ಜುನೈದ್ ಶೀರ್ಗೋಜ್ರಿ ಎಂದು ಗುರುತಿಸಲಾಗಿದ್ದು ಆತ ಮೇ.13ರಂದು ಪೋಲೀಸ್‌ ಉದ್ಯೋಗಿ ರಿಯಾಜ್ ಅಹ್ಮದ್ ಹತ್ಯೆಯಲ್ಲಿ ಭಾಗಿಯಾಗಿದ್ದ” ಎಂದಿದ್ದಾರೆ.

ಉಗ್ರರ ಬಳಿಯಿದ್ದ ಎರಡು ಎಕೆ-47 ರೈಫಲ್‌ಗಳು ಮತ್ತು ಪಿಸ್ತೂಲ್ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!