ಯುದ್ಧಪೀಡಿದ ಉಕ್ರೇನ್‌ಗೆ ವಿಶ್ವಬ್ಯಾಂಕ್‌ನಿಂದ 3 ಮಿಲಿಯನ್ ಡಾಲರ್ ನೆರವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾದ ದಾಳಿಗೆ ಸಿಲುಕಿರುವ ಉಕ್ರೇನ್‌ಗೆ ವಿಶ್ವಬ್ಯಾಂಕ್ 3 ಮಿಲಿಯನ್ ಡಾಲರ್ ಹಣಕಾಸು ನೆರವು ನೀಡಲು ಮುಂದಾಗಿದೆ. ಇದನ್ನು ತುರ್ತು ಅಗತ್ಯ ಎಂದು ಪರಿಗಣಿಸಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಮನವಿ ಪುರಸ್ಕರಿಸಲಿದೆ.

ಉಕ್ರೇನ್‌ನಲ್ಲಿ ಯುದ್ಧದಿಂದ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಾಣ ಹಾನಿ ಮತ್ತು ಭೀಕರತೆ ಆತಂಕ ಮೂಡಿಸಿದೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಹೀಗಾಗಿ ವಿಶ್ವಬ್ಯಾಂಕ್ ಮತ್ತು ಐಎಂಎಫ್ ಉಕ್ರೇನ್ ಬೆಂಬಲಕ್ಕೆ ನಿಲ್ಲಲಿದೆ ಎಂದು ವಿಶ್ವ ಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಮತ್ತು ಐಎಂಎಫ್ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಜಂಟಿ ಹೇಳಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!