ಕೊಡಗು ಜಿಲ್ಲೆಯಲ್ಲಿ ಮತ್ತೆ 3 ಹೊಸ ಕೋವಿಡ್ ಪ್ರಕರಣ ಪತ್ತೆ

ಹೊಸದಿಗಂತ ವರದಿ,ಮಡಿಕೇರಿ:

ಮಂಗಳವಾರ ಶೂನ್ಯ ಪಾಸಿಟಿವಿಟಿ ಪ್ರಮಾಣ ದಾಖಲಾಗಿದ್ದ ಕೊಡಗು ಜಿಲ್ಲೆಯಲ್ಲಿ ಬುಧವಾರ ಮತ್ತೆ 3 ಹೊಸ ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ ಮೂರು ಪ್ರಕರಣಗಳು ವರದಿಯಾಗಿದ್ದು,ಪಾಸಿಟಿವಿಟಿ ದರ‌ ಶೇ.2.88ರಷ್ಟಿದೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47,635ರಷ್ಟಾಗಿದೆ. ಕಳೆದ 24ಗಂಟೆಗಳಲ್ಲಿ 7ಮಂದಿ ಗುಣಮುಖರಾಗಿದ್ದು, ಇದುವರೆಗೆ ಒಟ್ಟು 47,081ಮಂದಿ ಸೋಂಕು ಮುಕ್ತರಾದಂತಾಗಿದೆ.ಒಟ್ಟು 451 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 103 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 32ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!