ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇತ್ತೀಚೆಗೆ ರಾಜ್ಯ ಸರ್ಕಾರದ 11 ಮಸೂದೆಗಳಿಗೆ ಹೆಚ್ಚಿನ ಮಾಹಿತಿ ಕೋರಿ ತಿರಸ್ಕಾರ ಮಾಡಿದ್ದರು. ಇದೀಗ ಸದ್ಯ 11 ವಿಧೇಯಕಗಳ ಪೈಕಿ 3 ವಿಧೇಯಕಗಳಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇನ್ನೂ 8 ಬಿಲ್ಗಳಿಗೆ ರಾಜ್ಯಪಾಲರ ಅನುಮೋದನೆ ಪಡೆಯುವುದು ಬಾಕಿ ಇದೆ.
ಈ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ
ಕರ್ನಾಟಕ ಸಾರ್ವಜನಿಕ ಪರೀಕ್ಷೆ ವಿಧೇಯಕ-2023
ರೇಣುಕಾ ಯಲ್ಲಮ್ಮದೇವಿ ದೇಗುಲ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ-2024
ಮುನ್ಸಿಪಾಲಿಟಿ & ಸಂಬಂಧಿತ ಇತರ ಕಾಯ್ದೆಗಳು ತಿದ್ದುಪಡಿ ವಿಧೇಯಕ-2024
ಜನವರಿಯಿಂದ ಇಲ್ಲಿಯವರೆಗೆ ರಾಜ್ಯಪಾಲರು ಒಟ್ಟು 11 ಮಸೂದೆಗಳನ್ನು ವಾಪಸ್ ಕಳುಹಿಸಿದ್ದರು. ಇದು ರಾಜ್ಯ ಸರ್ಕಾರದ ಆಕ್ರೋಶಕ್ಕೂ ಕಾರಣವಾಗಿತ್ತು. ಸದ್ಯ ಈ ವಿಚಾರ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಘರ್ಷಣೆಕ್ಕೆ ಕಾರಣವಾಗಿದೆ.
ಬಾಕಿ 8 ಬಿಲ್ಗಳು ಯಾವವು?
ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ)
ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ಮಸೂದೆ
ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಮಸೂದೆ
ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ
ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ
ಗದಗ ಬೆಟಗೇರಿ ವ್ಯಾಪರ, ಸಂಸ್ಕೃತಿ, ಪ್ರದರ್ಶನ ಪ್ರಾಧಿಕಾರ ವಿಧೇಯಕ
ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಮಸೂದೆ
ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ (ತಿದ್ದುಪಡಿ) ಮಸೂದೆ, 2024 ಅನ್ನು ಅಂಗೀಕರಿಸಿತ್ತು. ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು 2011 ಮತ್ತು 2012 ರಲ್ಲಿ ಮಾಡಲಾದ ಕಾಯ್ದೆಗೆ ತಿದ್ದುಪಡಿಗಳನ್ನು ರದ್ದುಗೊಳಿಸಿತ್ತು. ಈ ವಿಚಾರವಾಗಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಲಾಗಿದ್ದು, ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ತೀರ್ಪು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಕಾರಣ, ರಾಜ್ಯಪಾಲರು ಮಸೂದೆಯ ಬಗ್ಗೆ ಹೆಚ್ಚಿನ ವಿವರವನ್ನು ಕೋರಿ ವಿಧೇಯಕಗಳನ್ನು ತಿರಸ್ಕರಿಸಿದ್ದರು.