ಕಾಶ್ಮೀರದಲ್ಲಿ ಉಗ್ರರಿಗೆ ಶಸ್ತ್ರಾಸ್ತ್ರ, ಮದ್ದುಗುಂಡು ಪೂರೈಸುತ್ತಿದ್ದ ಮೂವರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ (ಗಡಿ ನಿಯಂತ್ರಣ ರೇಖೆ) ಯಲ್ಲಿ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳ ಕಳ್ಳ ಸಾಗಣೆಯಲ್ಲಿ ತೊಡಗುವ ಮೂಲಕ ಉಗ್ರಗಾಮಿಗಳಿಗೆ ನೆರವಾಗುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಹಜಿತ್ರಾ ಕರ್ನಾಹ್ ನಿವಾಸಿಗಳಾದ ಮೊಹಮ್ಮದ್ ಅಮೀರ್, ನಿಸಾರ್ ಅಹ್ಮದ್ ಮತ್ತು ಸುಧಪೋರಾ ಕರ್ನಾಹ್ ನಿವಾಸಿ ಕಫೀಲ್ ಅಹ್ಮದ್ ಎಂದು ಗುರುತಿಸಲಾಗಿದೆ.
ಈ ಮೂವರು ಕಣಿವೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಉಗ್ರಗಾಮಿ ಸಂಘಟನೆಗಳಿಗೆ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಮಾಡುತ್ತಿದ್ದರು ಎಂದು ವಕ್ತಾರರು ತಿಳಿಸಿದ್ದಾರೆ.
ಆರೋಪಿಗಳ ಬಳಿಯಿಂದ ಒಂದು ಚೀನೀ ಪಿಸ್ತೂಲ್ ಹಾಗೂ ಮ್ಯಾಗಜೀನ್, 14 ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!