ಹೊಸದಿಗಂತ ಡಿಜಿಟಲ್ ಡೆಸ್ಕ್
ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಸಿಂಗಪೆರುಮಾಳ್ ದೇವಸ್ಥಾನದ ಬಳಿಯ ಸೇನಾ ತರಬೇತಿ ಕೇಂದ್ರದಲ್ಲಿ ಮೂರು ರಾಕೆಟ್ ಗ್ರೆನೇಡ್‌ಗಳು ಪತ್ತೆಯಾಗಿವೆ. ಈ ವಿಚಾರ ಗಮನಿಸಿದ ಕೆಲವರು ತಕ್ಷಣವೇ ಪೊಲೀಸರಿಗೆ ಎಚ್ಚರಿಕೆ ನೀಡಿದ್ದು ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚೆಂಗಲ್ಪಟ್ಟು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬಾಂಬ್ ಸ್ಕ್ವಾಡ್ ತಂಡದ ಸಹಾಯದಿಂದ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಸಿಂಗಪೆರುಮಾಳ್ ದೇಗುಲದ ಬಳಿ ಇರುವ ಸೇನಾ ತರಬೇತಿ ಕೇಂದ್ರ ಕೆಲ ದಿನಗಳಿಂದ ಬಳಕೆಯಾಗುತ್ತಿರಲಿಲ್ಲ. ಸದ್ಯ ಪೊಲೀಸರು ಸ್ಥಳದಲ್ಲಿ ಪತ್ತೆಯಾದ ಗ್ರೆನೇಡ್‌ನ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ