Sunday, August 14, 2022

Latest Posts

ಮರಳು ಸಾಗಿಸುತ್ತಿದ್ದ ಲಾರಿ ಹರಿದು ಮೂರು ಕುರಿಗಳು ಸಾವು

ಹೊಸದಿಗಂತ ವರದಿ, ವಿಜಯಪುರ:

ಮರಳು ಸಾಗಿಸುತ್ತಿದ್ದ ಲಾರಿ ಹಾಯ್ದು ಮೂರು ಕುರಿಗಳು ಸಾವಿಗೀಡಾಗಿದ್ದು, ವ್ಯಕ್ತಿಯೊಬ್ಬ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಬಳಿಯಲ್ಲಿ ನಡೆದಿದೆ.
ಈ ಅಪಘಾತ ನಡೆಯುತ್ತಿದ್ದಂತೆ ಕುರಿಗಾರರು ಲಾರಿ ಅಡ್ಡಗಟ್ಟಿ ತಡೆದು ಚಾಲಕನನ್ನು ಕೆಳಗಿಳಿಸಿ ಥಳಿಸಿದ್ದಾರೆ. ಅನಂತರ ಲಾರಿ ಮಾಲಿಕ ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕು ಕೊಡೇಕಲ್ ಗ್ರಾಮದ ವೆಂಕಟೇಶರನ್ನು ಸ್ಥಳಕ್ಕೆ ಕರೆಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಕ್ಕೆ ಕೆಲ ಹೊತ್ತು ರಸ್ತೆ ಸಂಚಾರ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
ಈ ಅಪಘಾತ ಸ್ಥಳದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧನೊಬ್ಬ ಬಚಾವ್ ಆಗಿದ್ದು, ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss