ನವಿ ಮುಂಬೈನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನವಿ ಮುಂಬೈನ ಶಹಬಾಜ್ ಗ್ರಾಮದಲ್ಲಿ ಬೆಳಗ್ಗೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಮುಂಜಾನೆ 5 ಗಂಟೆ ಸುಮಾರಿಗೆ ಕಟ್ಟಡ ಕುಸಿದಿದೆ ಎಂದು ನವಿ ಮುಂಬೈ ಮಹಾನಗರ ಪಾಲಿಕೆ ಆಯುಕ್ತ ಕೈಲಾಸ್ ಶಿಂಧೆ ತಿಳಿಸಿದ್ದಾರೆ. “ಇದು ಜಿ+3 ಕಟ್ಟಡ. ಶಹಬಾಜ್ ಗ್ರಾಮವು ಬೇಲಾಪುರ ವಾರ್ಡ್‌ಗೆ ಒಳಪಡುತ್ತದೆ. ಕಟ್ಟಡದಲ್ಲಿ 13 ಫ್ಲಾಟ್‌ಗಳಿದ್ದವು. ಇಬ್ಬರು ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಮತ್ತು ಇಬ್ಬರು ಸಿಲುಕಿರುವ ಸಾಧ್ಯತೆಯಿದೆ. ಎನ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ,” ಎಂದು ಕೈಲಾಸ್ ಶಿಂಧೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!