November 12, 2026
Thursday, November 12, 2026
spot_img

ನ್ಯೂಯಾರ್ಕ್‌ನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ: ಅವಶೇಷಗಳಡಿ 8 ಜೀವಗಳ ಅಂತ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅಮೆರಿಕದ ನ್ಯೂಯಾರ್ಕ್‌ನ ಬ್ರೂಕ್ಲಿನ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ.

ಬುಧವಾರ ಸಂಜೆ ಸಂಭವಿಸಿದ ಈ ಅವಘಡದ ಬಳಿಕ ಗುರುವಾರ ಬೆಳಗ್ಗೆ ಅವಶೇಷಗಳಡಿಯಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಮುಂದುವರಿದಿದೆ.

ಇದನ್ನೂ ಓದಿ:

ಬ್ರೂಕ್ಲಿನ್‌ನ ಫ್ಲಾಟ್‌ಬುಷ್ ಪ್ರದೇಶದಲ್ಲಿ ಬುಧವಾರ ಸಂಜೆ ಸುಮಾರು 4 ಗಂಟೆಗೆ ಕಟ್ಟಡ ಕುಸಿದಿದೆ. ಕಟ್ಟಡವು ಪಕ್ಕದಲ್ಲಿದ್ದ ನಿರ್ಮಾಣ ಸ್ಥಳದ ಮೇಲೂ ಬಿದ್ದ ಪರಿಣಾಮ, ಎರಡೂ ಪ್ರದೇಶಗಳಲ್ಲಿ ಜನರು ಸಿಲುಕಿಕೊಂಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ತಂಡಗಳು ಅವಶೇಷಗಳ ನಡುವೆ ಸಿಲುಕಿದ್ದವರನ್ನು ಪತ್ತೆಹಚ್ಚುವ ಕಾರ್ಯ ಆರಂಭಿಸಿವೆ.

19 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಈ ದುರಂತದಲ್ಲಿ ಕನಿಷ್ಠ 19 ಮಂದಿ ಗಾಯಗೊಂಡಿದ್ದು, ಅವರಲ್ಲಿ ಮೂವರು ಅಗ್ನಿಶಾಮಕ ಸಿಬ್ಬಂದಿಯೂ ಸೇರಿದ್ದಾರೆ. ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Must Read