ಶ್ರೀನಗರದಲ್ಲಿ ಮೂವರು ಎಲ್‌ಇಟಿ ಉಗ್ರರನ್ನು ಹೊಡೆದುರುಳಿಸಿದ ಭದ್ರತಾಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್
ಜಮ್ಮು-ಕಾಶ್ಮೀರದ ಶ್ರೀನಗರ ಜಿಲ್ಲೆಯ ಹೊರವಲಯದ ನೌಗಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆಗೈದಿದ್ದಾರೆ.
ನೌಗಾಮ್​​ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಆ ಪ್ರದೇಶವನ್ನು ಸುತ್ತುವರಿದಿದ್ದರು. ಈ ವೇಳೆ ಉಗ್ರರು ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಅದಕ್ಕೆ ಪ್ರತಿದಾಳಿ ನಡೆಸಿದ ಯೋಧರು ಉಗ್ರರನ್ನು ಹತ್ಯೆಗೈದಿದ್ದಾರೆ.
ಉಗ್ರರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಗೆ ಸೇರಿದವರು, ಅವರಿಂದ ಅಪಾರ ಪ್ರಮಾಣದ ಮಾರಕಾಸ್ತ್ರಗಳು, ಶಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಹತ್ಯೆಗೀಡಾದ ಒರ್ವ ಉಗ್ರನ ಗುರುತು ಪತ್ತೆಯಾಗಿದ್ದು ಆತ ಇತ್ತೀಚೆಗೆ ಖನ್ಮೊಹ್ ನ ಸರ್ಪಂಚ್ ಸಮೀರ್ ಭಟ್ ನ ಹತ್ಯೆಯಲ್ಲಿ ಭಾಗಿಯಾಗಿದ್ದನು ಎಂದು ಕಾಶ್ಮೀರ ವಲಯ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!