Wednesday, February 8, 2023

Latest Posts

ಸಿನಿಮಾಗಳಿಗೆ 3 ಸಾವಿರ ಕೋಟಿ ಹೂಡಿಕೆ: ಹೊಂಬಾಳೆ ಫಿಲ್ಮ್ಸ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಜಿಎಫ್, ಕಾಂತಾರ ಸಹಿತ ವಿವಿಧ ಹಿಟ್ ಸಿನಿಮಾ ನೀಡಿದ ಹೊಂಬಾಳೆ ಫಿಲ್ಮಸ್ ಮುಂದಿನ ಐದು ವರ್ಷಗಳಲ್ಲಿ ಬರೋಬ್ಬರಿ ಮೂರು ಸಾವಿರ ಕೋಟಿ ಬಂಡವಾಳವನ್ನು ಚಿತ್ರರಂಗದಲ್ಲಿ ಹೂಡಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ನಿರ್ಮಾಪಕ ವಿಜಯ್ ಕಿರಗಂದೂರು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಈ ಮೂಲಕ ಹಲವು ಬಿಗ್ ಬಜೆಟ್ ಚಿತ್ರಗಳು ಈ ನಿರ್ಮಾಣ ಸಂಸ್ಥೆಯಿಂದ ಮೂಡಿ ಬರುವ ಸೂಚನೆ ಸಿಕ್ಕಿದೆ.

ರ ಈಗಾಗಲೇ ಅವರು ಸಾವಿರ ಕೋಟಿಯಷ್ಟು ಹಣವನ್ನು ಚಿತ್ರೋದ್ಯಮದಲ್ಲಿ ಹೂಡಿಕೆ ಮಾಡಿದ್ದಾರೆ. ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳಿನಲ್ಲಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸದ್ಯದಲ್ಲೇ ಅವರು ಬಾಲಿವುಡ್ ಚಿತ್ರರಂಗಕ್ಕೂ ಎಂಟ್ರಿ ಕೊಡಲಿದ್ದಾರೆ ಶಾರುಖ್ ಖಾನ್ ಸಿನಿಮಾ ಮಾಡುವ ಕುರಿತು ಮಾತುಕತೆ ಕೂಡ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಚಿತ್ರಗಳಿಂದ ಈ ಸಂಸ್ಥೆಗೆ ದೊಡ್ಡ ಮಟ್ಟದ ಲಾಭ ಆಗಿದೆ. ಇತ್ತೀಚೆಗೆ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಕೂಡ ಸೂಪರ್ ಹಿಟ್ ಆಯಿತು. ಈಈ ಎಲ್ಲಾ ಸಿನಿಮಾಗಳಿಂದ ಆದ ಲಾಭವನ್ನು ಚಿತ್ರರಂಗಕ್ಕೆ ಮರಳಿ ಹೂಡಿಕೆ ಮಾಡಲು ವಿಜಯ್ ನಿರ್ಧರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!