3 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಹಾಯಕ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ

ಹೊಸದಿಗಂತ ವರದಿ,ವಿಜಯಪುರ:

ನಗರದ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾನೆ.
ನಿಗಮದ ಸಹಾಯಕ ಅಭಿವೃದ್ಧಿ ಅಧಿಕಾರಿ ದಯಾನಂದ ಸಂಗಣ್ಣ ಬಡಿಗೇರ, 3 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದು, ಈ ಆರೋಪಿ 5 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ.
ಕಾಶಿಬಾಯಿ ಪರಮಾತ್ಮ ಮಡಿವಾಳರ ಎಂಬವರಿಗೆ ನಿಗಮದಿಂದ ಮಂಜೂರಾದ ಎಮ್ಮೆ ಸಾಲದ 50 ಸಾವಿರ ರೂ. ಹಣ ಕೊಡಲು 5 ಸಾವಿರ ರೂ. ಬೇಡಿಕೆ ಇಟ್ಟಿದ್ದ, 3 ಸಾವಿರ ರೂ. ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
ಎಸಿಬಿ ಎಸ್’ಪಿ ಬಿ.ಎಸ್. ನೇಮಗೌಡ ಅವರ ನಿರ್ದೇಶನದಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!