ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ- ಹರಿಯಾಣದ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳದಲ್ಲಿ ಗುರುವಾರ ಮುಂಜಾನೆ ಅಪಘಾತ ಸಂಭವಿಸಿದೆ.
ಪ್ರತಿಭಟನಾ ನಿರತ ಮಹಿಳಾ ರೈತರ ಮೇಲೆ ಟ್ರಕ್ ಹರಿದು ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.
ದೆಹಲಿ ಹರಿಯಾಣ ಗಡಿಯಲ್ಲಿ ರೊಟೇಷನ್ ಮೇಲೆ ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ರಾತ್ರಿಯೆಲ್ಲಾ ಪ್ರತಿಭಟನೆ ನಡೆಸಿ, ಇಂದು ಮುಂಜಾನೆ ಮನೆಗೆ ತೆರಳಲು ಡಿವೈಡರ್ ಮೇಲೆ ಕುಳಿತು ರಿಕ್ಷಾಗಾಗಿ ಕಾಯುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ದಾಖಲು ಮಾಡುವ ವೇಳೆಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಪಂಜಾನ್ ನ ಮಾನ್ಸಾ ಜಿಲ್ಲೆಯವರು ಎಂದು ಹೇಳಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.