ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ತೆಲಂಗಾಣದ ಕಾಮರೆಡ್ಡಿಯ ಗಾಂಧಾರಿ ಮಂಡಲದ ಮುಧೋಳಿ ಗ್ರಾಮದಲ್ಲಿ ನಡೆದಿದೆ.
ನಾಯಿ ದಾಳಿಯಿಂದಾಗಿ ಬಾಲಕನ ತಲೆ ಹಾಗೂ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಫಂಕ್ಷನ್ ಹಾಲ್ ನ ಹೊರಗಡೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಬಾಲಕ ಚೀರಾಡುತ್ತಿರುವುದನ್ನು ಕಂಡು ಸ್ಥಳೀಯರು ನಾಯಿಗಳನ್ನು ಓಡಿಸಿದ್ದಾರೆ. ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.