ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೂರು ವರ್ಷದ ಬಾಲಕನೊಬ್ಬ 15 ತಿಂಗಳ ಮಗುವಿನ ತಲೆಗೆ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಗುಂಡೇಟಿಗೆ 15 ತಿಂಗಳ ಮಗು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ವಿಚಾರ ತಿಳಿದು ಪೊಲೀಸರು ಸ್ಥಳಕ್ಕಾಗಮಿಸುವುದರೊಳಗೆ ಮಗು ರಕ್ತದ ಮಡುವಿನಲ್ಲಿತ್ತು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಗುವಿನ ಪ್ರಾಣ ಪಕ್ಷಿ ಹಾರಿಹೋಗಿದೆ. ಈ ಗುಂಡಿನ ದಾಳಿಯ ಬಗ್ಗೆ ಮನೆಯ ಹಿರಿಯರನ್ನು ವಿಚಾರಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ.
ಮಗು ಸಾವಿನ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅಜ್ಜ. ಗುಂಡು ಹಾರಿಸಿದ ಮೂರು ವರ್ಷದ ಬಾಲಕ ಕೂಡ ತಮ್ಮ ಸಂಬಂಧಿಕರ ಮಗು ಎಂದು ಹೇಳಿದ್ದಾರೆ. ಅಮೆರಿಕದಲ್ಲಿ ಆತ್ಮರಕ್ಷಣೆಗಾಗಿ ಬಂದೂಕುಗಳನ್ನು ಬಳಸುತ್ತಿದ್ದಾರೆ. ತಿಳಿದೋ ತಿಳಿಯದೆಯೋ ಮಕ್ಕಳ ಕೈಗೆ ಗನ್ ಸಿಕ್ಕಿ ಬೀಳುತ್ತಿದ್ದು, ಪದೇ ಪದೇ ಇಂತಹ ಅಪಘಾತಗಳು ಸಂಭವಿಸುತ್ತಿವೆ.