30 ಕೋಟಿ ರೂ. ಗಳ ವೆಚ್ಚದಲ್ಲಿ ಅಭಿವೃದ್ಧಿಗೆ ಸಾಕ್ಷಿಯಾಗಲಿದೆ ಅಂಕೋಲಾ

ಹೊಸದಿಗಂತ ವರದಿ, ಅಂಕೋಲಾ:

ಪಟ್ಟಣದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದ್ದು 30 ಕೋಟಿ ರೂಪಾಯಿಗಳ ಅಭಿವೃದ್ಧಿಗೆ ಕಾಮಗಾರಿಗಳು
ಜರುಗಲಿವೆ ಸುಂದರ ರಸ್ತೆಗಳು,ವಿದ್ಯುದೀಕರಣ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮಹತ್ವ ನೀಡುವ ಮೂಲಕ ಅಂಕೋಲಾ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿಸಲಾಗುವುದು ಎಂದು ಪುರಸಭೆ ಅಧ್ಯಕ್ಷೆ ಶಾಂತಲಾ ನಾಡಕರ್ಣಿ ಅವರು ಹೇಳಿದರು.
73 ನೇ ಗಣರಾಜ್ಯೋತ್ಸವದ ದ್ವಜಾರೋಹಣವನ್ನು ಪಟ್ಟಣದ ಸಮಾಜ ಮಂದಿರದ ಎದುರು ನೆರವೇರಿಸಿ ಮಾತನಾಡಿದ ಅವರು ಅಭಿವೃದ್ಧಿಯಲ್ಲಿ ರಾಜಕಾರಣ ಬೇಡ ವೈಯಕ್ತಿಕ ಮತ್ತು ರಾಜಕೀಯ  ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಟ್ಟಣದ ಅಭಿವೃದ್ದಿಯಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಸ್ವಾತಂತ್ರ್ಯ ಸಂಗ್ರಾಮ ಭವನದ ಆವರಣದಲ್ಲಿ ದ್ವಜಾರೋಹಣ ನಡೆಸಿದ ತಾಲೂಕು ದಂಡಾಧಿಕಾರಿ ಉದಯ ಕುಂಬಾರ ಮಾತನಾಡಿ ಇಂದು ದೇಶ ಪ್ರತಿಯೊಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿ ವಿಶ್ವ ಮಟ್ಟದಲ್ಲಿ ಗುರುತಿಸಿಕೊಳ್ಳಲು ಪ್ರಜಾಪ್ರಭುತ್ವದ ಕೊಡುಗೆ ಅಪಾರ ಎಂದು ಹೇಳಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿ ಪಿ ವೈ ಸಾವಂತ್, ಪುರಸಭೆ ಮುಖ್ಯಾಧಿಕಾರಿ ಶೃತಿ ಗಾಯಕವಾಡ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ್, ಪಿ.ಎಸ್.ಐ ಪ್ರವಿಣಕುಮಾರ್,ಪುರಸಭೆ ಉಪಾಧ್ಯಕ್ಷೆ ರೇಖಾ ಗಾಂವಕರ್, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಾ ನಾಯ್ಕ, ನ್ಯಾಯವಾದಿ ಸುಭಾಷ ನಾರ್ವೇಕರ್, ಪ್ರಮುಖರುಗಳಾದ ಭಾಸ್ಕರ ನಾರ್ವೇಕರ, ಅರುಣ ನಾಡಕರ್ಣಿ ಮೊದಲಾದವರು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!