Friday, December 8, 2023

Latest Posts

ಹಾವೇರಿಯಲ್ಲಿ ಹೆಲ್ಮೆಟ್‌ ಕಡ್ಡಾಯಕ್ಕೆ 30 ದಿನದ ಗಡುವು : ನೂತನ ಎಸ್ಪಿ ಅನ್ಶುಕುಮಾರ

ಹೊಸದಿಗಂತ ವರದಿ ಹಾವೇರಿ:

ಜಿಲ್ಲೆಯಲ್ಲಿ ವಾಹನ ಸಂಚಾರ ನಿಯಮಗಳ ಪಾಲನೆಯಲ್ಲಿ ವ್ಯಾಪಕವಾದ ಲೋಪವಿದೆ. ಈ ನಿಟ್ಟಿನಲ್ಲಿ ೩೦ದಿನಗಳ ಗಡುವು ನೀಡಲಾಗುವುದು. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಸಂಚಾರ ನಿಯಮಗಳ ಪಾಲನೆ ಕುರಿತು ವ್ಯಾಪಕವಾಗಿ ಪ್ರಚಾರ ಕೈಗೊಳ್ಳಲಾಗುವುದು ಎಂದು ನೂತನ ಎಸ್ಪಿ ಅನ್ಶುಕುಮಾರ ಹೇಳಿದರು.

ಮಹಾತ್ಮಾ ಗಾಂಧಿ ವೃತ್ತದಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಎರಡು ದಿನವಾಗಿದೆ, ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಈಗಷ್ಟೇ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಜಿಲ್ಲೆಯಲ್ಲಿ ವಾಹನ ಸಂಚಾರ ನಿಯಮಗಳ ಕಠಿಣ ಅನುಷ್ಟಾನಕ್ಕೆ ಮುಂದಾಗಲಿದ್ದೇವೆ. ಈ ಕುರಿತು ಈಗಾಗಲೇ ಕೆಳಹಂತದ ಸಿಬ್ಬಂದಿಗೆ ಸೂಚನೆ ನೀಡಿದ್ದು, ವಿವಿಧ ಇಲಾಖೆ, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ವಾಹನ ಸಂಚಾರ ನಿಯಮಗಳ ಪಾಲನೆಯಲ್ಲಿ ಶಿಸ್ತು ಮೂಡಿಸಲು ಮುಂದಾಗುವುದಾಗಿ ತಿಳಿಸಿದರು.

ಪ್ರಸ್ತುತ ಜಿಲ್ಲೆಯಲ್ಲಿ ಪ್ರತಿ ವರ್ಷ 150-220 ರಸ್ತೆ ಅಪಘಾತಗಳು ನಡೆಯುತ್ತಿದ್ದು, ಅದರಲ್ಲಿ ಬಹುತೇಕ ಯುವ ಜನಾಂಗದ ಸುಮಾರು 30ಕ್ಕೂ ಹೆಚ್ಚು ಜನರು ಬಲಿಯಾಗುತ್ತಿದ್ದಾರೆ. ಈ ಸಂಚಾರ ನಿಯಮಗಳ ಅನುಷ್ಠಾನಕ್ಕೆ ಮೊದಲ ಆದ್ಯತೆ ಕೊಡಬೇಕಿದೆ, ಹಾಗೂ ಜಿಲ್ಲೆಯ ಜನರೂ ಸಹ ಸಹಕರಿಸಬೇಕಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!