ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗಷ್ಟೇ ತಮ್ಮ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಬಿಜೆಪಿ ಸಂಸದರಿಗೆ ಸರ್ಕಾರಿ ನಿವಾಸ ಖಾಲಿ ಮಾಡಲು 30 ದಿನಗಳ ಕಾಲಾವಕಾಶ ನೀಡಲಾಗಿದೆ.
ಇತ್ತೀಚೆಗಷ್ಟೇ ಪಂಚರಾಜ್ಯ ವಿಧಾನಸಭಾ ಚುನಾವಣೆ ನಡೆದಿದೆ. ಇದರಲ್ಲಿ ನಾಲ್ವರು ಕೇಂದ್ರ ಸಚಿವರು ಸೇರಿ 21 ಸಂಸದರು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು.
ಇದರಲ್ಲಿ 12 ಸಂಸದರು ಗೆಲುವು ಸಾಧಿಸಿದ್ದಾರೆ, 11 ಸಂಸದರು ಗೆಲುವಿನ ನಂತರ ಸಂಸತ್‌ಗೆ ರಾಜೀನಾಮೆ ನೀಡಿದ್ದಾರೆ.
ಸರ್ಕಾರಿ ಮನೆಗಳನ್ನು ಖಾಲಿ ಮಾಡುವಂತೆ ಲೋಕಸಭೆಯ ವಸತಿ ಸಮಿತಿ ನೊಟೀಸ್ ನೀಡಿದೆ ಎಂದು ವರದಿತಾಗಿದೆ.