ಯುವಕರಿಗೆ 30 ಲಕ್ಷ ಸರ್ಕಾರಿ ಉದ್ಯೋಗ: ರಾಹುಲ್ ಗಾಂಧಿಯಿಂದ ಪಂಚ ಗ್ಯಾರಂಟಿ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಯುವಕರಿಗೆ 30 ಲಕ್ಷ ಸರ್ಕಾರಿ ಉದ್ಯೋಗ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಘೋಷಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೀಡುತ್ತಿರುವ ಗ್ಯಾರಂಟಿಗಳಿಗೆ (Modi ki Guarantee) ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಅಸ್ತ್ರ ಬಿಟ್ಟಿದೆ. ರೈತರು, ಯುವಕರು, ಅಸಂಘಟಿತ ವಲಯದವರು, ಯುವೋದ್ಯಮಿಗಳು ಹೀಗೆ ವಿವಿಧ ವಲಯದ ಜನರನ್ನು ಆಕರ್ಷಿಸುವಂತಹ ಖಾತ್ರಿ ಭರವಸೆಗಳನ್ನು ಕಾಂಗ್ರೆಸ್ ನೀಡಿದೆ.

ರಾಜಸ್ಥಾನದ ಬನ್ಸ್ವಾರಾದಲ್ಲಿ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆ (Bharat Jodo Nyay Yatre) ಅಂಗವಾಗಿ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು (Congress Party) ಯುವಕರಿಗಾಗಿ ಏನು ಮಾಡಲು ಹೊರಟಿದೆ ಅಂದರೆ ಮೊದಲನೆಯದಾಗಿ, ಭಾರತದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ತುಂಬಿಲ್ಲ. ಬಿಜೆಪಿಯವರು ಅದನ್ನೂ ತುಂಬುವುದಿಲ್ಲ. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾವು ಮಾಡುವ ಮೊದಲ ಕೆಲಸವೆಂದರೆ 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವುದಾಗಿದೆ ಎಂದರು.

ಜೊತೆಗೆ ಪದವೀಧರರು ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಘೋಷಿಸಿದರು. ಈ ಶಿಷ್ಯವೇತನದ ಅಡಿಯಲ್ಲಿ ಯುವಕರಿಗೆ ಒಂದು ವರ್ಷ ತರಬೇತಿ ನೀಡಲಾಗುವುದು. ತರಬೇತಿ ಸಮಯದಲ್ಲಿ ರೂ.1 ಲಕ್ಷ ಸ್ಟೈಫಂಡ್ ನೀಡಲಾಗುವುದು ಎಂದರು.

ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ‘ಯುವ ರೋಶನಿ’ ಅಡಿಯಲ್ಲಿ ಜಿಲ್ಲೆಗಳಲ್ಲಿ ಸ್ಟಾರ್ಟ್‌ಅಪ್‌ ಆರಂಭಿಸುವುದಾಗಿ ಭರವಸೆ ನೀಡಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳು
ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ
ಗುತ್ತಿಗೆ ಕೆಲಸಗಾರರಿಗೆ (ಗಿಗ್ ವರ್ಕರ್ಸ್) ಸಾಮಾಜಿಕ ಭದ್ರತೆ
ಖಾಲಿ ಇರುವ 30 ಲಕ್ಷ ಸರ್ಕಾರಿ ನೌಕರಿಗಳ ನೇಮಕಾತಿ
ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಸೋರಿಕೆ ತಡೆಯಲು ಕಠಿಣ ಕಾನೂನು
ಸ್ಟಾರ್ಟಪ್​ಗಳಿಗೆ 5,000 ಕೋಟಿ ರೂ ಫಂಡ್ ನಿಯೋಜನೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!