ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗೃಹಪ್ರವೇಶ ಕಾರ್ಯಕ್ರಮ ಒಂದರಲ್ಲಿ ಊಟ ಸೇವಿಸಿದ ನಂತರ ಸುಮಾರು 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಅಸ್ಪತ್ರೆ ಸೇರಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ನಡೆದಿದೆ.ರಾಣೇಬೆನ್ನೂರಿನಲ್ಲಿ ನಿನ್ನೆ ಬಸವರಾಜ ಶೇಖಪ್ಪ ಎಂಬುವವರ ಗೃಹಪ್ರವೇಶ ಕಾರ್ಯಕ್ರಮ ಸಂದರ್ಭ ಊಟ ಸೇವಿಸಿದ ನಂತರ ಸುಮಾರು 30 ಜನರು ಅಸ್ವಸ್ಥರಾಗಿದ್ದಾರೆ.
ಶುಕ್ರವಾರ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದವರು. ಶನಿವಾರ ಅಸ್ವಸ್ಥರಾಗಿದ್ದಾರೆ ಬೆಳಿಗ್ಗೆಯಿಂದ ಮೂವತ್ತಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಸ್ವಸ್ಥರಾದವರನ್ನು ರಾಣೇಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಸೂಕ್ತವಾದ ಚಿಕಿತ್ಸೆ ನೀಡಲಾಗುತ್ತಿದೆ.
ಅಸ್ವಸ್ಥಗೊಂಡ ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಿದ್ದು ಆರೋಗ್ಯವು ಸ್ಥಿರವಾಗಿದೆ ಎಂದು ರಾಣಿಬೆನ್ನೂರು ತಾಲೂಕ ಸರ್ಕಾರಿ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.