Wednesday, June 7, 2023

Latest Posts

ಪತಿ ಚಾಕೊಲೇಟ್‌ ತಂದು ಕೊಡಲಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಎರಡು ಮಕ್ಕಳ ತಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಚಿಕ್ಕಮಕ್ಕಳು ಏನಾದರು ಕೇಳಿದಾಗ ತಂದು ಕೊಡಲಿಲ್ಲವೆಂದರೆ ಮುನಿಸಿಕೊಳ್ಳುವುದು ಅಥವಾ ಅಳುವುದನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮಹಿಳೆ ಗಂಡ ಚಾಕೊಲೇಟ್‌ ತಂದುಕೊಡಲಿಲ್ಲವೆಂದು ಬೇಸರಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಂದಿನಿ‌(30) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.

ಆರು ವರ್ಷದ ಹಿಂದೆ ಮದುವೆಯಾಗಿದ್ದ ಮೃತ ನಂದಿನಿ‌ಗೆ ಇಬ್ಬರು ಮಕ್ಕಳಿದ್ದು, ಪತಿ ಸಲೂಲ್​ನಲ್ಲಿ ಕೆಲಸ ಮಾಡಿಕೊಂಡಿದ್ದರು. ಎಂದಿನಂತೆ ನಿನ್ನೆ ಬೆಳಗ್ಗೆ ಪತಿ ಕೆಲಸಕ್ಕೆ ಹೋಗುವಾಗ ಚಾಕೋಲೆಟ್ ತೆಗೆದುಕೊಂಡು ಬರುವಂತೆ ಕೇಳಿದ್ದಳಂತೆ. ಆದರೆ ಮಧ್ಯಾಹ್ನವಾದರೂ ಪತಿ ಚಾಕೊಲೇಟ್ ತಂದು ಕೊಟ್ಟಿಲ್ಲ. ಅಲ್ಲದೇ ಫೋನ್ ಮಾಡಿದರೂ ಪತಿ ಸ್ವೀಕರಿಸಿಲ್ವಂತೆ. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಪತಿ ಮನೆಗೆ ಬಂದು ನೋಡಿದಾಗ ನಂದಿನಿ ನೇಣು ಹಾಕಿಕೊಂಡಿದ್ದಳು. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಆದರೆ ಅಷ್ಟರಲ್ಲಾಗಲೇ ನಂದಿನಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಆಕೆಯ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಣ್ಣೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!