ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಆರೋಗ್ಯ ಕೇಂದ್ರ ಸ್ಥಾಪನೆಗೆ 300 ಕೋಟಿ ರೂ. ಮೀಸಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಈ ವರ್ಷ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಮತ್ತು ಕಲ್ಯಾಣ ಕರ್ನಾಟಕದಲ್ಲಿ ಆರೋಗ್ಯ ಸೌಲಭ್ಯಗಳನ್ನು ವಿಸ್ತರಿಸುವ ಗುರಿಯನ್ನು ಹೊಂದಿರುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದ್ದು, 250 ರಿಂದ 300 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ ಎಂದು ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ತಿಳಿಸಿದ್ದಾರೆ.

ಕರ್ನಾಟಕದ ಕಲ್ಯಾಣ ಪ್ರದೇಶದ 7 ಜಿಲ್ಲೆಗಳಲ್ಲಿ 70 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ 221 ಕೋಟಿ ರೂ. ವೆಚ್ಚದಲ್ಲಿ 46 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯುವ ಯೋಜನೆಯನ್ನು ಸರ್ಕಾರ ಘೋಷಿಸಿದ್ದು, ಅದರಲ್ಲಿ ಮಂಡಳಿಯು 33 ಕ್ಕೆ ಅನುದಾನವನ್ನು ನೀಡುತ್ತದೆ. ಉಳಿದ ಆಸ್ಪತ್ರೆಗೆ ವಿಜಯನಗರ ಜಿಲ್ಲೆಯಲ್ಲಿ ಮಿನರಲ್ ಫಂಡ್‍ನಿಂದ ಹಣವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!