ಪಾಕ್ ಮೀನುಗಾರಿಕಾ ದೋಣಿಯಿಂದ 300 ಕೋಟಿ ರೂ. ಮೌಲ್ಯದ ಡ್ರಗ್ಸ್, ಶಸ್ತ್ರಾಸ್ತ್ರಗಳು ವಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಕೋಸ್ಟ್ ಗಾರ್ಡ್(ಐಸಿಜಿ) 300 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು 40 ಕೆಜಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ 10 ಜನರಿದ್ದ ಪಾಕಿಸ್ತಾನದ ದೋಣಿಯನ್ನು ಭಾರತೀಯ ಸಮುದ್ರದಲ್ಲಿ ವಶಕ್ಕೆ ಪಡೆದುಕೊಂಡಿದೆ.

ದೋಣಿಯಲ್ಲಿದ್ದ 10 ಮಂದಿ ಸಿಬ್ಬಂದಿಯನ್ನು ಸಹ ಬಂಧಿಸಲಾಗಿದೆ. ಗುಜರಾತ್ ಎಟಿಎಸ್ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಮೀನುಗಾರಿಕಾ ಬೋಟ್ ಅಲ್ ಸೊಹೆಲಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಕೋಸ್ಟ್ ಗಾರ್ಡ್ ಟ್ವೀಟ್ ನಲ್ಲಿ ತಿಳಿಸಿದೆ.

ಕಾರ್ಯಾಚರಣೆಯಲ್ಲಿ 300 ಕೋಟಿ ರೂಪಾಯಿ ಮೌಲ್ಯದ ಸುಮಾರು 40 ಕೆಜಿ ಮಾದಕ ವಸ್ತು ಮತ್ತು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ತನಿಖೆಗಾಗಿ ಓಖಾಗೆ ದೋಣಿಯನ್ನು ತರಲಾಗುತ್ತಿದೆ ಎಂದು ಕೋಸ್ಟ್ ಗಾರ್ಡ್ ತಿಳಿಸಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!