ಉಜ್ವಲ ಫಲಾನುಭವಿಗಳಿಗೆ 300 ರೂ. ಸಬ್ಸಿಡಿ: 2025 ಮಾರ್ಚ್‌ವರೆಗೆ ಯೋಜನೆ ವಿಸ್ತರಿಸಿದ ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಜ್ವಲ ಯೋಜನೆ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿ ಮತ್ತೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ನೀಡುತ್ತಿದ್ದ 200 ರೂಪಾಯಿ ಸಬ್ಸಿಡಿಯನ್ನು 300 ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಇದೀಗ ಈ ಯೋಜನೆಯನ್ನು ಮುಂದಿನ ವರ್ಷ ಮಾರ್ಚ್ ತಿಂಗಳ ವರೆಗೆ ವಿಸ್ತರಿಸಲು ಸಂಪುಟ ಅನುಮೋದನೆ ನೀಡಿದೆ.

14.2 ಕೆಜಿ LPG ಸಿಲಿಂಡರ್‌ಗೆ ನೀಡುತ್ತಿದ್ದ 300 ರೂಪಾಯಿ ಸಬ್ಸಿಡಿ ಯೋಜನೆ ಲಾಭವನ್ನು ಮತ್ತೆ ಒಂದು ವರ್ಷಕ್ಕೆ ವಿಸ್ತರಣೆಯಾಗಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪಿಯೂಷ್ ಗೋಯೆಲ್, ಸಬ್ಸಿಡಿ ವಿಸ್ತರಣೆ ಘೋಷಣೆ ಮಾಡಿದ್ದಾರೆ. ಪ್ರತಿ ವರ್ಷಕ್ಕೆ 12 ರೀಫಿಲ್‌ಗಳಿಗೆ 14.2 ಕೆಜಿ ಸಿಲಿಂಡರ್‌ಗಳಿಗೆ 300 ರೂಪಾಯಿ ಸಬ್ಸಿಡಿ ನೀಡಲಾಗುತ್ತಿದೆ ಎಂದರು. .

2022ರ ಮೇ ತಿಂಗಳಲ್ಲಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 200 ರೂಪಾಯಿ ಸಬ್ಸಿಡಿ ನೀಡಲು ಘೋಷಣೆ ಮಾಡಿತ್ತು. 2023ರ ಅಕ್ಟೋಬರ್ ತಿಂಗಳಲ್ಲಿ 200 ರೂಪಾಯಿ ಸಬ್ಸಿಡಿಯನ್ನು 300 ರೂಪಾಯಿಗೆ ಏರಿಕೆ ಮಾಡಿ ಬಡವರ ಮೇಲಿದ್ದ ಹಣದುಬ್ಬರದ ಹೊರೆಯನ್ನು ತಗ್ಗಿಸಲಾಗಿತ್ತು. ಇದರಿಂದ 603 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ಲಭ್ಯವಾಗುತ್ತಿತ್ತು.

ಎಲ್‌ಪಿಜಿ ಸಂಪರ್ಕವು ಗ್ರಾಮೀಣ ಮತ್ತು ವಂಚಿತ ಬಡ ಕುಟುಂಬಗಳಿಗೆ ಲಭ್ಯವಾಗುವಂತೆ ಮಾಡಲು, ಬಡ ಕುಟುಂಬಗಳ ವಯಸ್ಕ ಮಹಿಳೆಯರಿಗೆ ಠೇವಣಿ-ಮುಕ್ತ ಎಲ್‌ಪಿಜಿ ಸಂಪರ್ಕಗಳನ್ನು ಕೇಂದ್ರ ಸರ್ಕಾರ ಒದಗಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!