ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮರನಾಥ ಯಾತ್ರೆಗೆ ತೆರಳಿ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಂಡಿದ್ದ 300 ಕನ್ನಡಿಗರು ಸುರಕ್ಷಿತವಾಗಿದ್ದಾರೆ.
ಭಾರೀ ಮಳೆ ಹಾಗೂ ಭೂಕುಸಿತದಿಂದಾಗಿ ತೊಂದರೆಗೆ ಸಿಲುಕಿದ್ದು ಕನ್ನಡಿಗರು ಶೀಘ್ರವೇ ರಾಜ್ಯಕ್ಕೆ ವಾಪಾಸಾಗಲಿದ್ದಾರೆ. ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆಗಳು ಸಂಚಾರಕ್ಕೆ ಬಾರದಂತಾಗಿವೆ. ಹೀಗಾಗಿ ಯಾತ್ರೆ ಮುಗಿಸಿ ವಾಪಾಸಾಗುವವರು ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಕನ್ನಡಿಗರ ರಕ್ಷಣೆಗೆ ಸರ್ಕಾರ ಮುಂದಾಗಿದ್ದು, ಶೀಘ್ರವೇ ಕನ್ನಡಿಗರು ತಾಯ್ನಾಡಿಗೆ ಮರಳಲಿದ್ದಾರೆ.