300 ಕಿ.ಮೀ ಟ್ರಾಫಿಕ್ ಜಾಮ್ : 48 ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಿಲುಕಿದ ಯಾತ್ರಿಕರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಹಾ ಕುಂಭಮೇಳಕ್ಕೆ ಹೋಗುವ ಮಾರ್ಗಗಳಲ್ಲಿ ನೂರಾರು ಕಿ.ಮೀ ಟ್ರಾಫಿಕ್ ಜಾಮ್‌ ಉಂಟಾಗಿದ್ದು, ಸಾವಿರಾರು ಭಕ್ತರು ಹೆದ್ದಾರಿಗಳಲ್ಲಿ ಸಿಲುಕಿಕೊಂಡಿದ್ದಾರೆ. ವಾಹನಗಳ ಸಾಲು 300 ಕಿ.ಮೀ.ವರೆಗೆ ಸಾಲುಗಟ್ಟಿ ನಿಂತಿವೆ ಎಂದು ವರದಿಯಾಗಿದೆ.

ವಸಂತ ಪಂಚಮಿಯ ಅಮೃತ ಸ್ನಾನದ ನಂತರ, ಜನಸಂದಣಿ ಕಡಿಮೆಯಾಗಬಹುದು ಎಂಬ ಊಹೆಗಳಿದ್ದವು. ಆದರೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಸಂಚಾರವನ್ನು ನಿರ್ವಹಿಸುವುದು ಕಷ್ಟಕರವಾಗಿದೆ. ನೆರೆಯ ಮಧ್ಯಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಪೊಲೀಸರು ಪ್ರಯಾಗ್‌ರಾಜ್‌ಗೆ ಹೋಗುವ ಮಾರ್ಗದಲ್ಲಿ ವಾಹನ ಸಂಚಾರವನ್ನು ತಡೆದಿದ್ದಾರೆ. ಸುಮಾರು 200-300 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಪೊಲೀಸರು ಭಕ್ತರಿಗೆ ಮನವಿ ಮಾಡುತ್ತಿದ್ದಾರೆ.

 ಈ ಬಗ್ಗೆ ಪ್ರತಿಕ್ರಿಯಿಸಿರುವ ರೇವಾ ವಲಯದ ಪೊಲೀಸ್ ಮಹಾನಿರ್ದೇಶಕ ಸಾಕೇತ್ ಪ್ರಕಾಶ್ ಪಾಂಡೆ, ವಾರಾಂತ್ಯದ ಜನದಟ್ಟಣೆಯಿಂದಾಗಿ ಟ್ರಾಫಿಕ್‌ ಸಮಸ್ಯೆ ಉಂಟಾಗಿದೆ. ಪರಿಸ್ಥಿತಿ ಒಂದೆರಡು ದಿನಗಳಲ್ಲಿ ಸರಿಯಾಗುವ ಸಾಧ್ಯತೆಯಿದೆ. ಪ್ರಯಾಗ್‌ರಾಜ್ ಆಡಳಿತದ ಜೊತೆ ಮಾತಾಡಿ ವಾಹನಗಳಿಗೆ ತೆರಳಲು ಅನುಮತಿ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!