ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸ ದಿಗಂತ ವರದಿ, ಮಂಡ್ಯ:
ಕೊರೋನಾ ಸೋಂಕಿತರು ಹೆಚ್ಚಿದ ಕಾರಣ ತಾಲೂಕಿನ ಹನಕೆರೆ ಗ್ರಾಮದಲ್ಲಿ ಆತಂಕದ ಛಾಯೆ ಮನೆ ಮಾಡಿದೆ. ಶಾಸಕ ಎಂ. ಶ್ರೀನಿವಾಸ್ ಅವರ ಗ್ರಾಮವನ್ನು ಆರೋಗ್ಯಾಧಿಕಾರಿಗಳು ತಾಲೂಕು ಆಡಳಿತದ ಸೂಚನೆ ಮೇರೆಗೆ ಕಂಟೋನ್ಮೆಂಟ್ ಜೋನ್ ಮಾಡಲಾಗಿದೆ.
ಗ್ರಾಮದಲ್ಲಿ ಸುಮಾರು 300ಕ್ಕೂ ಹೆಚ್ಚು ಮಂದಿ ಸೋಂಕಿತರು ಕಂಡು ಬಂದ ಕಾರಣ ಗ್ರಾಮವನ್ನು ಕಂಟೋನ್ಮೆಂಟ್ ಜೋನ್ಗೆ ಒಳಪಡಿಸಿ ಸೀಲ್ಡೌನ್ ಮಾಡಲಾಗಿದೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬರುವ ಹನಕೆರೆ ಗ್ರಾಮ ಶಾಸಕ ಎಂ. ಶ್ರೀನಿವಾಸ್ ಅವರ ಸ್ವಗ್ರಾಮವೂ ಆಗಿದೆ. ಈ ಗ್ರಾಮದಲ್ಲಿ ಸುಮಾರು 300ಕ್ಕೂ ಹೆಚ್ಚು ಮಂದಿ ಸೋಂಕಿತರು ಪತ್ತೆಯಾದ ಕಾರಣ ಈ ಗ್ರಾಮದಿಂದ ಯಾರೂ ಹೊರಗೆ ಬರುವಂತಿಲ್ಲ ಹಾಗೂ ಗ್ರಾಮಕ್ಕೆ ಯಾರೂ ಹೋಗುವಂತಿಲ್ಲ ಎಂದು ನಿರ್ಬಂಧ ವಿಧಿಸಲಾಗಿದೆ.