ಹೊಸದಿಗಂತ ಡಿಜಿಟಲ್ ಡೆಸ್ಕ್:
250ರಿಂದ 300 ಉಗ್ರರು ಜಮ್ಮು ಮತ್ತು ಕಾಶ್ಮೀರದ ಗಡಿಯೊಳಗೆ ನುಸುಳಲು ಹೊಂಚು ಹಾಕುತ್ತಿರುವ ಬಗ್ಗೆ ಸ್ಪೋಟಕ ಮಾಹಿತಿ ಸಿಕ್ಕಿದೆ.
ಈ ಕುರಿತು ಬಿಎಸ್‌ಎಫ್ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದು, 250ರಿಂದ 300 ಉಗ್ರರು ಕಾಶ್ಮೀರದ ಗಡಿಯೊಳಗೆ ನುಸುಳಲು ಕಾಯುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಲಭ್ಯವಾಗಿದೆ.
ಉಗ್ರರ ಒಳನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸುವ ನಿಟ್ಟಿನಲ್ಲಿ ಗಡಿ ಭದ್ರತಾ ಪಡೆಗಳು ಸನ್ನದ್ಧವಾಗಿವೆ ಎಂದು ಬಿಎಸ್‌ಎಫ್ ಇನ್‌ಸ್ಪೆಕ್ಟರ್ ಜನರಲ್ ಅಶೋಕ್ ಯಾದವ್ ಮಾಹಿತಿ ನೀಡಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಭದ್ರತಾ ಪಡೆಗಳು ಮತ್ತು ಕಾಶ್ಮೀರದ ಜನರ ನಡುವಿನ ಸಂಪರ್ಕವು ಹೆಚ್ಚಾಗಿದೆ. ಜನರು ನಮ್ಮೊಂದಿಗೆ ಸಹಕರಿಸಿದರೆ, ನಾವು ಅಭಿವೃದ್ಧಿ ಚಟುವಟಿಕೆಗಳನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಬಹುದು ಎಂದು ಯಾದವ್ ತಿಳಿಸಿದ್ದಾರೆ.