ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮೂಲಸೌಕರ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯ ಹಿನ್ನೆಲೆ ಭಾರತೀಯ ರೈಲ್ವೆ ಶುಕ್ರವಾರ 300 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಿದೆ. ರೈಲ್ವೆ ಇಲಾಖೆಯ ಮಾಹಿತಿ ಪ್ರಕಾರ ಇಂದು ಹೊರಡಬೇಕಿದ್ದ 95 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ.
ಐಆರ್‌ಸಿಟಿಸಿ ವೆಬ್‌ಸೈಟ್ ಮೂಲಕ ಬುಕ್ ಮಾಡಿದ ಟಿಕೆಟ್‌ಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗುತ್ತದೆ ಮತ್ತು ಬಳಕೆದಾರರ ಖಾತೆಗಳಲ್ಲಿ ಮರುಪಾವತಿಯನ್ನು ಮಾಡಲಾಗುತ್ತದೆ ಎಂಬುದನ್ನು ರೈಲು ಪ್ರಯಾಣಿಕರು ಗಮನಿಸಬೇಕು.
ಕೌಂಟರ್‌ಗಳ ಮೂಲಕ ಟಿಕೆಟ್ ಕಾಯ್ದಿರಿಸಿದವರು ಮರುಪಾವತಿಯನ್ನು ಪಡೆಯಲು ಮೀಸಲಾತಿ ಕೌಂಟರ್‌ಗೆ ಭೇಟಿ ನೀಡಬೇಕು.