ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ 3000 ಕೋಟಿ ರೂ. ಕಾರ್ಯಯೋಜನೆ ರೂಪಿಸಲಾಗಿದೆ : ಸಿಎಂ ಬೊಮ್ಮಾಯಿ

ದಿಗಂತ ವರದಿ ಕಲಬುರಗಿ:

ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ 3000 ಕೋಟಿ ರೂ. ಗಳ ಕಾರ್ಯಯೋಜನೆ ರೂಪಿಸಲಾಗಿದ್ದು, ಮುಂಬರುವ ಬಜೆಟ್ ನಲ್ಲಿ ಮಂಡಿಸಿ ಒಂದೇ ವರ್ಷದಲ್ಲಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಅವರು ಮಂಗಳವಾರ ಕರ್ನಾಟಕ ಕಾರ್ಯನಿರತ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ  36ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕದ ಕೊಡುಗೆಯನ್ನು ಸ್ಮರಿಸಿದ ಸಿಎಂ, ನಮ್ಮ ಸರ್ಕಾರ ಇಡೀ ಕಲ್ಯಾಣ ಕರ್ನಾಟಕದ ಅಭಿವೃದ್ದಿಗೆ ಬದ್ದವಾಗಿದೆ. ಶೀಘ್ರ ಈ ಭಾಗದ ಎಲ್ಲ ಪ್ರತಿನಿಧಿಗಳ ಸಭೆ ಕರೆದು ಅಭಿವೃದ್ಧಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತೇನೆ. ಇದಕ್ಕೆ ಹಣಕಾಸು ಒದಗಿಸುವುದರ ಜೊತೆಗೆ ಒಂದೇ ವರ್ಷದಲ್ಲಿ ಅಭಿವೃದ್ದಿ ಸಾಕಾರ ಮಾಡಲಾಗುವುದು ಎಂದರು.
ಹೈದ್ರಾಬಾದ ಕೋಶವನ್ನು ಇನ್ನಷ್ಟು ಗಟ್ಟಿ, ಸ್ವಾವಲಂಬಿಯನ್ನಾಗಿ ಮಾಡಿ, ಖಾಲಿ ಇರುವ 16ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!