3,000 ಕೋಟಿ ಸಾಲ ವಂಚನೆ ಕೇಸ್‌ : ಅನಿಲ್‌ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ ED ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಯೆಸ್ ಬ್ಯಾಂಕ್‌ಗೆ 3,000 ಕೋಟಿ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಉದ್ಯಮಿ ಅನಿಲ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಗ್ರೂಪ್​ಗೆ ಸೇರಿದ ಹಲವು ಕಂಪನಿಗಳ ಮೇಲೆ ದಾಳಿ ಮಾಡಿದೆ.

ಸುಮಾರು 35ಕ್ಕೂ ಹೆಚ್ಚು ಸ್ಥಳಗಳು, ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ (RAAGA)ನ 50 ಕಂಪನಿಗಳ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಡಿ ದಾಳಿ ನಡೆಸಿರುವುದಾಗಿ ರೆಡ್‌ಬಾಕ್ಸ್ ಗ್ಲೋಬಲ್ ಇಂಡಿಯಾ X ನಲ್ಲಿ ಪೋಸ್ಟ್ ಹಂಚಿಕೊಂಡಿದೆ.

ಯೆಸ್‌ ಬ್ಯಾಂಕ್‌ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿದ್ದ 2 ಎಫ್‌ಐಆರ್‌ಗಳನ್ನು ಆಧರಿಸಿ ಹಾಗೂ ಬ್ಯಾಂಕ್ ಆಫ್ ಬರೋಡಾ, ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಮತ್ತಿತರ ಏಜೆನ್ಸಿಗಳಿಂದ ದೊರೆತ ಮಾಹಿತಿ ಆಧಾರದ ಮೇಲೆ ತೀವ್ರ ಶೋಧ ನಡೆಸುತ್ತಿದೆ. 25ಕ್ಕೂ ಹೆಚ್ಚು ಮಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!