ಕೊಡಗು ಜಿಲ್ಲೆಯಲ್ಲಿ 316 ಹೊಸ ಕೋವಿಡ್ ಪ್ರಕರಣ ಪತ್ತೆ

ಹೊಸದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 316 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ.
ಮಡಿಕೇರಿ ತಾಲೂಕಿನಲ್ಲಿ 92, ಸೋಮವಾರಪೇಟೆ ತಾಲೂಕಿನಲ್ಲಿ 116 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 108 ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 45,821ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 167 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 41892 ಮಂದಿ ಸೋಂಕು ಮುಕ್ತರಾದಂತಾಗಿದೆ.ಅಲ್ಲದೆ ಒಟ್ಟು 443 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ‌ಪ್ರಸಕ್ತ 3486 ಸಕ್ರಿಯ ಪ್ರಕರಣ, 235 ಕಂಟೈನ್ ಮೆಂಟ್ ವಲಯ ಹಾಗೂ ಕೋವಿಡ್ ಪಾಸಿಟಿವಿಟಿ ದರ‌ ಶೇ.16.06ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!