ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 319 ಮಂದಿಗೆ ಕೋವಿಡ್ ಸೋಂಕು, 4 ಸಾವು

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಫೆ.4) 319 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ವೇಳೆ 839 ಮಂದಿ ಗುರುವಾರ ಸೋಂಕು ಮುಕ್ತರಾಗಿದ್ದಾರೆ. 4 ಸಾವು ಸಂಭವಿಸಿದೆ. ಇವರಲ್ಲಿ ಮೂವರು ಹೊರ ಜಿಲ್ಲೆಯವರು ಎಂದು ಆರೋಗ್ಯ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡದಲ್ಲಿ 2,436 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ.5.08 ಆಗಿದೆ. ಜಿಲ್ಲೆಯಲ್ಲಿ ಈ ತನಕ 94,034 ಮಾಸ್ಕ್ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ. ಒಟ್ಟು ರೂ.1,14,87,280 ದಂಡ ವಸೂಲು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!