ಶ್ರೀಲಂಕಾ ನೌಕಾಪಡೆಯಿಂದ 32 ಭಾರತೀಯ ಮೀನುಗಾರರ ಬಂಧನ, 5 ದೋಣಿಗಳು ವಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶ್ರೀಲಂಕಾ ಅಧಿಕಾರಿಗಳು ಭಾನುವಾರ 32 ಭಾರತೀಯ ಮೀನುಗಾರರನ್ನು ಬಂಧಿಸಿದ್ದಾರೆ ಮತ್ತು 5 ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನೌಕಾಪಡೆ ತಿಳಿಸಿದೆ.

ಮನ್ನಾರ್‌ನ ಉತ್ತರದ ಸಮುದ್ರ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆಯ ಸಂದರ್ಭದಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ.

ಈ ಕುರಿತು ನೌಕಾಪಡೆ ತಿಳಿಸಿದ್ದು, ಶ್ರೀಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಐದು ಮೀನುಗಾರಿಕಾ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು 32 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ’ ಎಂದು ಹೇಳಿಕೆ ತಿಳಿಸಿದೆ.

ಇತರರ ಅಕ್ರಮ ಮೀನುಗಾರಿಕೆಯನ್ನು ತಡೆಯಲು ನೌಕಾಪಡೆಯು ಶ್ರೀಲಂಕಾದ ಪ್ರದೇಶದಲ್ಲಿ ನಿಯಮಿತ ಗಸ್ತು ಮತ್ತು ಕಾರ್ಯಾಚರಣೆಗಳನ್ನು ಮುಂದುವರೆಸಿದೆ.

ಬಂಧಿತ ಮೀನುಗಾರರನ್ನು ಮತ್ತು ಅವರ ದೋಣಿಗಳನ್ನು ತಲೈಮನ್ನಾರ್ ಪಿಯರ್‌ಗೆ ತರಲಾಗಿದ್ದು, ಕಾನೂನು ಕ್ರಮಕ್ಕಾಗಿ ಮನ್ನಾರ್‌ನ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ನೌಕಾಪಡೆ ತಿಳಿಸಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!