ಕೊಪ್ಪಳ ಜಿಲ್ಲೆಯಾದ್ಯಂತ 32 ಸಾವಿರ ಪ್ರಕರಣಗಳು ಪೆಂಡಿಂಗ್

ಹೊಸದಿಗಂತ ವರದಿ, ಕೊಪ್ಪಳ:

ಜಿಲ್ಲೆಯಾದ್ಯಂತ 32 ಸಾವಿರಕ್ಕಿಂತಲೂ ಹೆಚ್ಚಿನ ಪ್ರಕರಣಗಳು ಪೆಂಡಿಂಗ್ ಇವೆ ಎಂದು ಸಿವಿಲ್ ನ್ಯಾಯಾಧೀಶ ಮತ್ತು ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳದ ಮಹಾಂತೇಶ್ ಎಸ್. ದರಗದ ಹೇಳಿದರು.

ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಛೇರಿ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.8ರಂದು ನಡೆಯುವ ಲೋಕ ಅದಾಲತನಲ್ಲಿ 6 ರಿಂದ 7 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ಸುಳ್ಳು ಪ್ರಕರಣಗಳನ್ನು ಹೊರತುಪಡಿಸಿ ಬ್ಯಾಂಕ್ ಸಾಲ, ಪಾರ್ಟಿಷನ್ ಸೂಟ, ಪ್ರಿ ಲಿಟಿಗೇಶನ್ ಕೇಸ, ಕೌಟುಂಬಿಕ ಕಲಹ ಸೇರಿದಂತೆ ಇತರೆ ಹಲವಾರು ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತನಲ್ಲಿ ಇತ್ಯರ್ಥಪಡಿಸಲಾಗುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!