ರಾಜ್ಯದಲ್ಲಿ 328 ಜನರಿಗೆ ಕೊರೊನಾ ಸೋಂಕು: ಪಾಸಿಟಿವಿಟಿ ರೇಟ್ 4.55%

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 328 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಬೆಂಗಳೂರಿನಲ್ಲಿಯೇ 163 ಜನರಲ್ಲಿ ಕೊರೊನಾ ಸೋಂಕು(Corona Virus) ಬೆಳಕಿಗೆ ಬಂದಿದ್ದು, 409 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 1,159 ಸಕ್ರಿಯ ಕೇಸ್​ಗಳಿವೆ. ಇನ್ನು ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 4.55 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿಯೇ ಇಂದು 163 ಜನರಿಗೆ ಕೊರೊನಾ ಸೋಂಕು ಬೆಳಕಿಗೆ ಬಂದಿದೆ. ಇನ್ನುಳಿದಂತೆ ಬಾಗಲಕೋಟೆ 4, ಬಳ್ಳಾರಿ 9, ಬೆಂಗಳೂರು ಗ್ರಾಮಾಂತರ 18, ಚಾಮರಾಜನಗರ 5, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 7, ಚಿತ್ರದುರ್ಗ 5, ದಕ್ಷಿಣ ಕನ್ನಡ 8, ದಾವಣಗೆರೆ 3, ಧಾರವಾಡ 2, ಗದಗ 1, ಹಾಸನ 12, ಹಾವೇರಿ 1, ಕಲಬುರಗಿ 4, ಕೋಲಾರ 1, ಮಂಡ್ಯ 7, ಮೈಸೂರು 26, ರಾಯಚೂರು 4, ರಾಮನಗರ 3 ಶಿವಮೊಗ್ಗ 6, ತುಮಕೂರು 15, ಉಡುಪಿ 1, ಉತ್ತರ ಕನ್ನಡ 6, ವಿಜಯನಗರದಲ್ಲಿ 7 ಪ್ರಕರಣಗಳು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!