ಲೋಕಸಭೆಯಿಂದ 33 ವಿಪಕ್ಷ ಸಂಸದರ ಅಮಾನತು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸೋಮವಾರ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ 33 ವಿರೋಧ ಪಕ್ಷದ ಸಂಸದರನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದ್ದಾರೆ. ಲೋಕಸಭಾ ಭದ್ರತಾ ಉಲ್ಲಂಘನೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹೇಳಿಕೆ ನೀಡುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯ ಸಂದರ್ಭ ಸಂಸದರು ಸದನದ ಒಳಗೆ ಫಲಕಗಳನ್ನು ಪ್ರದರ್ಶಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಡಿಸೆಂಬರ್ 13 ರಂದು ನಡೆದ ಸಂಸತ್ತಿನಲ್ಲಿ ನಡೆದ ಭದ್ರತಾ ಉಲ್ಲಂಘನೆಯ ಘಟನೆಯ ಬಗ್ಗೆ ವಿರೋಧ ಪಕ್ಷದ ಸಂಸದರು ನಡೆಸಿದ ಗದ್ದಲದ ಬಳಿಕ ಅಮಾನತಿನ ಸಂಖ್ಯೆ ಹೆಚ್ಚಾಗಿದೆ. ಇದಲ್ಲದೇ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡ ಸಂಸದರ ಪಟ್ಟಿಯಲ್ಲಿ ಕಾಂಗ್ರೆಸ್‌ನ ಸಂಸದ ಅಧೀರ್ ರಂಜನ್ ಚೌಧರಿ, ಸದನದಲ್ಲಿ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಸೇರಿದ್ದಾರೆ. ಇದಲ್ಲದೇ ತೃಣಮೂಲ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಕಾಕೋಲಿ ಘೋಷ್ ದಸ್ತಿದಾರ್, ಸೌಗತ ರೇ ಮತ್ತು ಸತಾಬ್ದಿ ರಾಯ್ ಮತ್ತು ಡಿಎಂಕೆ ಸದಸ್ಯರಾದ ಎ ರಾಜಾ ಮತ್ತು ದಯಾನಿಧಿ ಮಾರನ್ ಕೂಡ ಈ ಪಟ್ಟಿಯಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!